ಎಎಪಿ ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಬದ್ಧವಾಗಿದೆ: ಕೇಜ್ರಿವಾಲ್

Prasthutha|

ನವದೆಹಲಿ: ಆಮ್ ಆದ್ಮಿ ಪಕ್ಷವು ವಿಪಕ್ಷಗಳ ಇಂಡಿಯಾ ಮೈತ್ರಿಗೆ ಬದ್ಧವಾಗಿದೆ ಮತ್ತು ಅದರಿಂದ ಹೊರಬರುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಹೇಳಿದ್ದಾರೆ.

- Advertisement -


2015ರ ಮಾದಕವಸ್ತು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಅವರನ್ನು ಬಂಧಿಸಿದ ನಂತರ, ರಾಜ್ಯದಲ್ಲಿ ಎಎಪಿ ಸರ್ಕಾರವು ರಾಜಕೀಯ ದ್ವೇಷದಲ್ಲಿ ತೊಡಗಿದೆ ಎಂದು ಕಾಂಗ್ರೆಸ್‌ನ ಪಂಜಾಬ್ ಘಟಕ ಆರೋಪಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಹೇಳಿಕೆಗಳು ಮಹತ್ವ ಪಡೆದುಕೊಂಡಿವೆ.


ಶಾಸಕ ಸುಖಪಾಲ್ ಸಿಂಗ್ ಖೈರಾ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗಿದೆ ಎಂದು ಎಎಪಿ ಈ ಆರೋಪವನ್ನು ತಳ್ಳಿಹಾಕಿದೆ.

Join Whatsapp