Home ಟಾಪ್ ಸುದ್ದಿಗಳು ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ 90 ಕ್ಷೇತ್ರಗಳಲ್ಲಿಯೂ ಎಎಪಿ ಏಕಾಂಗಿ ಸ್ಪರ್ಧೆ

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ 90 ಕ್ಷೇತ್ರಗಳಲ್ಲಿಯೂ ಎಎಪಿ ಏಕಾಂಗಿ ಸ್ಪರ್ಧೆ

ಚಂಡೀಗಢ: ಇದೇ ವರ್ಷ ಅಕ್ಟೋಬರ್​ನಲ್ಲಿ ಹರಿಯಾಣ ವಿಧಾನಸಭಾ ಚುನಾವಣೆ ನಡೆಯಲಿದ್ದು, ಎಲ್ಲ 90 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ ಎಂದು ಪಕ್ಷದ ಹಿರಿಯ ನಾಯಕ ಸಂಜಯ್ ಸಿಂಗ್ ಹೇಳಿದ್ದಾರೆ.

ಈ ಮೂಲಕ ಇಂಡಿಯಾ ಮೈತ್ರಿಕೂಟದ ಎಎಪಿ, ಕಾಂಗ್ರೆಸ್​ ಜೊತೆಗೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸುವ ಸುಳಿವನ್ನು ಆಮ್ ಆದ್ಮಿ ಪಕ್ಷ ನೀಡಿದೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಪಕ್ಷದ ಹಿರಿಯ ನಾಯಕ ಸಂದೀಪ್ ಪಾಠಕ್ ಅವರೊಂದಿಗೆ ಚಂಡೀಗಢದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪ್ರಬಲವಾಗಿ ಹೋರಾಡಲಿದೆ ಎಂದು ಅವರು ಹೇಳಿದರು.

Join Whatsapp
Exit mobile version