AAP ಶಾಸಕಿ ಮೇಲೆ ಹಲ್ಲೆ ನಡೆಸಿದ ಪತಿ !

Prasthutha|

ಚಂಡೀಗಢ: ಆಮ್ ಆದ್ಮಿ ಪಕ್ಷದ ಶಾಸಕಿ ಬಲ್ಜಿಂದರ್ ಕೌರ್ ಅವರ ಮೇಲೆ ಪತಿ ಸಾರ್ವಜನಿಕವಾಗಿಯೇ ಹಲ್ಲೆ ನಡೆಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -


ಪಂಜಾಬ್ ನಿವಾಸದಲ್ಲಿ ಬಲ್ಜಿಂದರ್ ಕೌರ್ ಮೇಲೆ ಶಾಸಕರಾಗಿರುವ ಪತಿ ಹಲ್ಲೆ ನಡೆಸಿರುವುದನ್ನು ನೋಡಿ ಜನ ಅಚ್ಚರಿಗೊಂಡಿದ್ದಾರೆ.
ವೀಡಿಯೋದಲ್ಲಿ ಪಂಜಾಬ್ ನ ತಲ್ವಾಂಡಿ ಸಾಬೋ ಕ್ಷೇತ್ರದಿಂದ ಎರಡು ಸಲ ಶಾಸಕರಾಗಿ ಆಯ್ಕೆಯಾಗಿರುವ ಸುಖರಾಜ್ ಸಿಂಗ್ ಅವರೊಂದಿಗೆ ಪತ್ನಿ ಬಲ್ಜಿಂದರ್ ಕೌರ್ ವಾದ ಮಾಡುತ್ತಿರುತ್ತಾರೆ. ಈ ವೇಳೆ ಆಕ್ರೋಶಗೊಂಡ ಸುಖರಾಜ್ ಪತ್ನಿಗೆ ಎಲ್ಲರ ಮುಂದೆ ಕಪಾಳ ಮೋಕ್ಷ ಮಾಡಿದ್ದಾರೆ.

Join Whatsapp