ರಾಷ್ಟ್ರಪತಿ ಚುನಾವಣೆ: ಯಶವಂತ್ ಸಿನ್ಹಾಗೆ ಬೆಂಬಲ ಸೂಚಿಸಿದ ಆಮ್ ಆದ್ಮಿ

Prasthutha|

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಜಂಟಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಆಮ್ ಆದ್ಮಿ ಪಕ್ಷ ಬೆಂಬಲಿಸಲಿದೆ ಎಂದು ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ತಿಳಿಸಿದ್ದಾರೆ.

- Advertisement -

ಸದ್ಯ ರಾಷ್ಟ್ರಪತಿ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, NDA ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಕಣದಲ್ಲಿದ್ದು, ಯಶವಂತ್ ಸಿನ್ಹಾ ಅವರು ಪ್ರತಿಸ್ಪರ್ಧೆಯನ್ನು ನೀಡುತಿದ್ದಾರೆ.

ನಾವು ದ್ರೌಪದಿ ಮುರ್ಮು ಅವರನ್ನು ಗೌರವಿಸುತ್ತೇವೆ. ಆದರೆ ಪ್ರಸಕ್ತ ಪರಿಸ್ಥಿತಿಯಲ್ಲಿ ವಿಪಕ್ಷಗಳ ಜಂಟಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುತ್ತದೆ ಎಂದು ಸಂಜಯ್ ತಿಳಿಸಿದರು.

- Advertisement -

ಇಂದು ದೆಹಲಿಯಲ್ಲಿ ಪಕ್ಷದ ಪಿಎಸಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್, ಪಂಜಾಬ್ ಸಂಸದ ರಾಘವ್ ಚಡ್ಡಾ, ಶಾಸಕ ಅತಿಶಿ ಮತ್ತು ಇತರರು ಭಾಗವಹಿಸಿದ್ದರು.

ರಾಷ್ಟ್ರಪತಿ ಚುನಾವಣೆಗೆ ಸೋಮವಾರ ಮತದಾನ ನಡೆಯಲಿದ್ದು, ದೆಹಲಿಯ ಸೇರಿದಂತೆ ಎರಡು ರಾಜ್ಯಗಳಲ್ಲಿ 10 ರಾಜ್ಯಸಭಾ ಸಂಸದರನ್ನು ಹೊಂದಿದೆ.
ಅಲ್ಲದೆ ಪಂಜಾಬ್’ನಲ್ಲಿ 92, ದೆಹಲಿಯಲ್ಲಿ 62 ಮತ್ತು ಗೋವಾದಲ್ಲಿ ಇಬ್ಬರು ಶಾಸಕರನ್ನು ಒಳಗೊಂಡಂತೆ ಒಟ್ಟು 156 ಶಾಸಕರನ್ನು ಹೊಂದಿದೆ.

Join Whatsapp