ದೆಹಲಿಯಲ್ಲಿ ಆಪ್ ಜಯಭೇರಿ ; ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಸಿಕ್ಕ ಜಯ ಎಂದ ಸಂತೋಷ್ ಕಾಮತ್

Prasthutha|

ಮಂಗಳೂರು:ರಾಜಧಾನಿ ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಜಯಭೇರಿ ಗಳಿಸಿದ್ದಲ್ಲದೆ, 15 ವರ್ಷಗಳಿಂದ ಅಧಿಕಾರದಲ್ಲಿದ್ದ ಬಿಜೆಪಿಯನ್ನು ಸೋಲಿಸಿ ಅಧಿಕಾರದ ಗದ್ದುಗೆಯೇರಿದ್ದು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ. ಮಂಗಳೂರಿನಲ್ಲಿ ಆಪ್ ಕಾರ್ಯಕರ್ತರು ಪಕ್ಷದ ಕಚೇರಿಯಲ್ಲಿ ಸಿಹಿ ಹಂಚಿಕೊಂಡು ಸಂಭ್ರಮ ಆಚರಿಸಿದ್ದಾರೆ.

ಬಲ್ಮಠದಲ್ಲಿರುವ ಪಕ್ಷದ ಕಚೇರಿಯ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಪಟ್ಟಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿದ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ದೆಹಲಿಯಲ್ಲಿ ಕಳೆದ ಹತ್ತು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷಕ್ಕೆ ರಾಜಧಾನಿಯ ಜನರು ಬಹುಮತ ನೀಡಿದ್ದಾರೆ. ಆಮೂಲಕ ಪಕ್ಷದ ಆಡಳಿತಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಕೇಜ್ರಿವಾಲರ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಜನರು ಮತ ನೀಡಿದ್ದು, ದೆಹಲಿ ಪಾಲಿಕೆಯಲ್ಲಿ 15 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿಯನ್ನು ಜನರು ಸೋಲಿಸಿದ್ದಾರೆ. ಇದು ಗುಜರಾತ್ ಫಲಿತಾಂಶದಲ್ಲೂ ಪ್ರತಿಫಲಿಸಲಿದೆ ಎಂದು ಹೇಳಿದ್ದಾರೆ.

- Advertisement -