ಎಎಪಿಯ ಅಮಾನತುಲ್ಲಾ ಖಾನ್ ಮೇಲೆ ದಾಳಿ: ‘ಆಧಾರರಹಿತ ಆರೋಪ’ ಎಂದ ಪಕ್ಷ

Prasthutha|

ನವದೆಹಲಿ: 2020 ರಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಭ್ರಷ್ಟಾಚಾರ ನಿಗ್ರಹ ದಳವು ಬಂಧಿಸಿದ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ವಿರುದ್ಧದ ಆರೋಪಗಳು ಆಧಾರರಹಿತ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

- Advertisement -

ದೆಹಲಿ ಭ್ರಷ್ಟಾಚಾರ ನಿಗ್ರಹ ದಳವು ದೆಹಲಿ ವಕ್ಫ್ ಮಂಡಳಿಯಲ್ಲಿ ಅಕ್ರಮ ನೇಮಕಾತಿಗಳಿಗೆ ಸಂಬಂಧಿಸಿದ ಎರಡು ವರ್ಷಗಳ ಹಿಂದಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓಖ್ಲಾ ಶಾಸಕ ಅಮಾನತುಲ್ಲಾ ಖಾನ್ ನನ್ನು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ವಿಚಾರಣೆಗೆ ಕರೆದು,ದಾಳಿ ನಡೆಸಿ ನಂತರ ಅವರನ್ನು ಬಂಧಿಸಲಾಗಿತ್ತು.

ಶಾಸಕನ ಬೆನ್ನಿಗೆ ನಿಂತಿರುವ ಎಎಪಿ, ಅವರ ವಿರುದ್ಧದ ಆರೋಪಗಳು ಆಧಾರರಹಿತ ಎಂದು ಹೇಳಿದೆ

- Advertisement -

ಅಮಾನತುಲ್ಲಾ ಖಾನ್ ಅವರು ದೆಹಲಿ ವಕ್ಫ್ ಮಂಡಳಿಯ ಅಧ್ಯಕ್ಷರಾಗಿ ಕೆಲಸ ಮಾಡುವಾಗ ಎಲ್ಲಾ ನಿಯಮಗಳು ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಮತ್ತು ಭ್ರಷ್ಟಾಚಾರ ಮತ್ತು ಪಕ್ಷಪಾತದ ಆರೋಪಗಳೊಂದಿಗೆ 32 ಜನರನ್ನು ಕಾನೂನುಬಾಹಿರವಾಗಿ ನೇಮಿಸಿಕೊಂಡಿದ್ದಾರೆ. ದೆಹಲಿ ವಕ್ಫ್ ಮಂಡಳಿಯ ಅಂದಿನ ಸಿಇಒ ಸ್ಪಷ್ಟವಾಗಿ ಹೇಳಿಕೆ ನೀಡಿದ್ದರು ಮತ್ತು ಅಂತಹ ಅಕ್ರಮ ನೇಮಕಾತಿಯ ವಿರುದ್ಧ ಜ್ಞಾಪನಾ ಪತ್ರವನ್ನು ನೀಡಿದ್ದರು” ಎಂದು ಭ್ರಷ್ಟಾಚಾರ ವಿರೋಧಿ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.



Join Whatsapp