Home ಟಾಪ್ ಸುದ್ದಿಗಳು SSLC ಫಲಿತಾಂಶ: ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಅಬ್ದುಲ್ ಮಜೀದ್

SSLC ಫಲಿತಾಂಶ: ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಅಬ್ದುಲ್ ಮಜೀದ್

ಬೆಂಗಳೂರು: ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು, ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಎ‌ಸ್‌ ‌ಡಿಪಿಐ ರಾಜ್ಯಾಧ್ಯಕ್ಷ  ಅಬ್ದುಲ್ ಮಜೀದ್ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ವಿದ್ಯಾರ್ಥಿ ಜೀವನದ ಅತಿ ಮುಖ್ಯ ಮೈಲುಗಲ್ಲಾದ 10ನೇ ತರಗತಿಯಲ್ಲಿ ಉತ್ತಿರ್ಣರಾಗಿದ್ದೀರಿ, ನಿಮಗೆ ಅಭಿನಂದನೆಗಳು. ನಿಮ್ಮ ಮುಂದಿನ ವಿದ್ಯಾಭ್ಯಾಸ ಯಶಸ್ಸುಗೊಳ್ಳಲಿ ಎಂದು ಹಾರೈಸುತ್ತೇನೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಹತಾಶರಾಗುವ ಅಗತ್ಯವಿಲ್ಲ, ನಿಮ್ಮ ಪ್ರಯತ್ನವನ್ನು ನೀವು ಮಾಡಿದ್ದೀರಿ, ಪರೀಕ್ಷೆ ಇರಬಹುದು ಜೀವನ ಇರಬಹುದು ಏಳು, ಬೀಳು ಸಹಜ, ಇಂದಿನಿಂದಲೇ ತಯಾರಿ ನಡೆಸಿ ಮುಂದಿನ ಪರೀಕ್ಷೆಗೆ ಆತ್ಮವಿಶ್ವಾಸದಿಂದ ಸಿದ್ದರಾಗಿ ಎಂದು ಹೇಳಿದ್ದಾರೆ.

Join Whatsapp
Exit mobile version