ಕಾರ್ಕಳ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಅಭಯ್ ಬಿಜೆಪಿ ಕಾರ್ಯಕರ್ತ, ಶಾಸಕ ಸುನೀಲ್ ಕುಮಾರ್ ಭಕ್ತ..!

Prasthutha|

ಕಾರ್ಕಳ: ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಅಭಯ್ ಬಿಜೆಪಿ ಕಾರ್ಯಕರ್ತ ಹಾಗೂ ಶಾಸಕ ಸುನೀಲ್ ಕುಮಾರ್‌ ಅವರ ಭಕ್ತ ಎಂದು ತಿಳಿದು‌ ಬಂದಿದೆ.

- Advertisement -

ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಯನ್ನು ಬಂಧಿಸಲಾಗಿದೆ.
ಅಲ್ತಾಫ್ ಹಾಗೂ ರಿಚರ್ಡ್, ಅಭಯ್ ಬಂಧಿತ ಆರೋಪಿಗಳು.

ಅಲ್ತಾಫ್ ಹಾಗೂ ಅಭಯ್ ಇಬ್ಬರೂ ಕಾರ್ಕಳ ಜೋಡುರಸ್ತೆ ಬಳಿ ಟಿಪ್ಪರ್ ನಿಲ್ಲಿಸುತ್ತಿದ್ದರು. ಇವರಿಬ್ಬರ ಮಧ್ಯೆ ಸ್ನೇಹ ಬೆಳೆದಿತ್ತು, ಇವರಿಬ್ಬರೂ ಒಟ್ಟಿಗೆ ತಿರುಗಾಡುತ್ತಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ. ಕಾರ್ಕಳ ಅತ್ಯಾಚಾರ ಕೇಸನ್ನು ಲವ್ ಜಿಹಾದ್​​ ಎಂದು ಆರೋಪಿಸಿದ್ದ ಬಿಜೆಪಿ, ಹಿಂದೂ ಸಂಘಟನೆಗಳಿಗೆ ಅಭಯ್ ಬಂಧನ ಮುಖ ಭಂಗ ತಂದಿದೆ. ಅಲ್ಲದೆ ಅಭಯ್ ಅಲ್ತಾಫ್ ​ಗೆ ಡ್ರಗ್ಸ್ ತಂದು ಕೊಟ್ಟಿದ್ದ ಎಂದು ತಿಳಿದುಬಂದಿದೆ.

- Advertisement -

ಇದೀಗ 3ನೇ ಆರೋಪಿ ಅಭಯ್​ನನ್ನು ಪೊಲೀಸರು ಬಂಧಿಸಿದ್ದು ಹೊಸ ಟ್ವಿಸ್ಟ್ ಸಿಕ್ಕಿದೆ. ಬಂಧಿತ ಆರೋಪಿ ಅಭಯ್ ಫೇಸ್ ​​ಬುಕ್ ​ನಲ್ಲಿ MLA ಸುನೀಲ್​​ಕುಮಾರ್​​ ಫೋಟೋ ಹಾಕಿಕೊಂಡಿದ್ದಾನೆ. ಅಷ್ಟೇ ಅಲ್ಲದೆ ಬಿಜೆಪಿ, ಬಜರಂಗದಳದಲ್ಲಿ ಗುರುತಿಸಿಕೊಂಡಿದ್ದಾನೆ.

ಅಭಯ್ ಇತನೇ ಪ್ರಥಮ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಕೊಟ್ಟಿದ್ದಾನೆ ಎಂದು ನಮಗೆ ಪ್ರಥಮವಾಗಿ ತನಿಖೆಯಲ್ಲಿ ಕಂಡುಬಂದಿರುತ್ತದೆ. ಕೃತ್ಯ ಎಸಗಿದ ಮೇಲೆ, ಪ್ರಥಮ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನ ಮಾಡಿರುವುದು ನಮಗೆ ತನಿಖೆಯಲ್ಲಿ ಕಂಡುಬಂದಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.



Join Whatsapp