ಕೋಲ್ಕತ್ತ: ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಇಂದು (ಗುರುವಾರ) ಬೆಳಿಗ್ಗೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾದರು.
ಬೆಳಿಗ್ಗೆ ಸುಮಾರು 11.10ರ ವೇಳೆಗೆ ಇಲ್ಲಿನ ಜಾರಿ ನಿರ್ದೇಶನಾಲಯದ ಕಚೇರಿಗೆ ಅವರು ಆಗಮಿಸಿದರು. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.