Home ಟಾಪ್ ಸುದ್ದಿಗಳು ಹನುಮಾನ್ ಚಾಲೀಸಾ ಪಠಣಕ್ಕೆ ABHM ಕರೆ: ಮಥುರಾದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಹನುಮಾನ್ ಚಾಲೀಸಾ ಪಠಣಕ್ಕೆ ABHM ಕರೆ: ಮಥುರಾದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಲಕ್ನೋ: ಈದ್ಗಾ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಿಸುವುದಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ (ಎಬಿಎಚ್ ಎಂ) ಕರೆ ನೀಡಿರುವ ಹಿನ್ನೆಲೆಯಲ್ಲಿ ಮಥುರಾದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಮಥುರಾದ ವಿವಿಧ ಕಡೆಗಳಲ್ಲಿ ಮಂಗಳವಾರ ಬೆಳಿಗ್ಗೆಯಿಂದ ಪೊಲೀಸ್ ಬ್ಯಾರಿಕೇಡ್ ಗಳನ್ನು ಹಾಕಲಾಗಿದ್ದು, ವಾಹನಗಳನ್ನು ತಪಾಸಣೆ ಮಾಡಿ ಕಳುಹಿಸಲಾಗುತ್ತಿದೆ.   ಹೆಚ್ಚಿನ ನಿಗಾ ಇಡುವಂತೆ ಮಥುರಾ ಜಿಲ್ಲಾಡಳಿತ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿಗೆ ನಿರ್ದೇಶನ ನೀಡಿದೆ.

ಈದ್ಗಾ ಮೈದಾನದಲ್ಲಿ ಗೋಪಾಲ ಜಲಾಭಿಷೇಕ ಮತ್ತು ಹನುಮಾನ್ ಚಾಲೀಸಾ ಪಠಿಸಲು ಅಖಿಲ ಭಾರತ ಹಿಂದೂ ಮಹಾಸಭಾ ಸೋಮವಾರ  ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಅನುಮತಿ ಕೇಳಿತ್ತು. 

ಜನವರಿ 28ರವರೆಗೂ ಈ ನಿರ್ಬಂಧ ಇರಲಿದ್ದು, ಈ ಅವಧಿಯಲ್ಲಿ ಯಾವುದೇ ರಾಜಕೀಯ, ಸಾಮಾಜಿಕ ಅಥವಾ ಧಾರ್ಮಿಕ ಸಂಘಟನೆಗಳು ಕಾರ್ಯಕ್ರಮ ನಡೆಸದಂತೆ ಐದಕ್ಕಿಂತ ಹೆಚ್ಚು ಜನರು ಒಂದೆಡೆ ಸೇರದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.

Join Whatsapp
Exit mobile version