Home ಟಾಪ್ ಸುದ್ದಿಗಳು ರಾಜ್ಯದಲ್ಲಿ ನಿಫಾ ವೈರಸ್ ಬಗ್ಗೆ ಕಟ್ಟೆಚ್ಚರ: ಮುಖ್ಯಮಂತ್ರಿ ಬೊಮ್ಮಾಯಿ

ರಾಜ್ಯದಲ್ಲಿ ನಿಫಾ ವೈರಸ್ ಬಗ್ಗೆ ಕಟ್ಟೆಚ್ಚರ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ ಭೀತಿ ಹೆಚ್ಚುತ್ತಿದ್ದು, ರಾಜ್ಯದಲ್ಲೂ ನಿಫಾ ವೈರಸ್ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇರಳ ರಾಜ್ಯದಲ್ಲಿ ಭೀತಿ ಹೆಚ್ಚಿಸಿರುವ ನಿಫಾ ವೈರಸ್ ತಡೆಗೆ ರಾಜ್ಯದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇರಳ ಗಡಿ ಭಾಗದಲ್ಲಿ ಬರುತ್ತಿರುವವನ್ನು ತಪಾಸಣೆ ನಡೆಸಲಾಗುತ್ತಿದೆ.

ಕೋವಿಡ್ ನಿಯಂತ್ರಣದೊಂದಿಗೆ ನಿಫಾ ವೈರಸ್ ಬಗ್ಗೆಯೂ ತೀವ್ರ ನಿಗಾ ಇಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಅಲ್ಲದೇ, ತಜ್ಞರಿಂದ ವರದಿ ಕೇಳಲಾಗಿದ್ದು, ವರದಿ ಬಂದ ಬಳಿಕ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

Join Whatsapp
Exit mobile version