370ನೇ ವಿಧಿ ರದ್ದು: ಆಗಸ್ಟ್ ನಿಂದ ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ತೀರ್ಮಾನ

Prasthutha|

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಆಗಸ್ಟ್ 2ರಿಂದ ಆಲಿಸಲು ಸುಪ್ರೀಂಕೋರ್ಟ್ ನಿರ್ಧರಿಸಿದೆ.

- Advertisement -


ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನದ 370 ನೇ ವಿಧಿಯನ್ನು ಕೇಂದ್ರ ಸರ್ಕಾರ 2019ರಲ್ಲಿ ರದ್ದು ಗೊಳಿಸಿತ್ತು. ರದ್ದುಗೊಳಿಸಿರುವುದನ್ನು ಸಮರ್ಥಿಸಿ ಸೋಮವಾರ ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿತ್ತು.


ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟಿನ ಮುಖ್ಯ ನಾಯಮೂರ್ತಿ ಡಿ ವೈ ಚಂದ್ರಚೂಡ್ ಅವರನ್ನೊಳಗೊಂಡ ಸಾಂವಿಧಾನಿಕ ಪೀಠವು, ಆಗಸ್ಟ್ 2ರಿಂದ ದಿನನಿತ್ಯವೂ ಅರ್ಜಿಗಳ ವಿಚಾರಣೆ ಆಲಿಸಲು ಒಪ್ಪಿಕೊಂಡಿದೆ.



Join Whatsapp