ರಾಜ್ಯಸಭೆಯಿಂದ ಸಭಾತ್ಯಾಗ: ಸ್ಪಷ್ಟನೆ ನೀಡಿದ ಖರ್ಗೆ

Prasthutha|

ಸುಳ್ಳು ಮತ್ತು ಜನರನ್ನು ದಾರಿ ತಪ್ಪಿಸುವುದು ಮೋದಿಯ ಅಭ್ಯಾಸವೆಂದ ಕಾಂಗ್ರೆಸ್ ಅಧ್ಯಕ್ಷ

- Advertisement -

ನವದೆಹಲಿ: ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದಗಳ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ಉತ್ತರ ನೀಡುತ್ತಿದ್ದಂತೆ ಇಂಡಿಯಾ ಬಣದ ವಿರೋಧ ಪಕ್ಷದ ಸಂಸದರು ಸಭಾತ್ಯಾಗ ನಡೆಸಿದ್ದು, ತಮ್ಮ ನಡೆಗೆ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯಸಭೆ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ವೇಳೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡದ ಕಾರಣ ವಿರೋಧ ಪಕ್ಷದ ಸಂಸದರು ರಾಜ್ಯಸಭೆಯಿಂದ ಹೊರನಡೆದಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

- Advertisement -

ಪ್ರಧಾನಿ ಮೋದಿ ಅಪ್ರಾಮಾಣಿಕರು ಎಂದು ಆರೋಪಿಸಿದ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ-ಆರ್‌ಎಸ್‌ಎಸ್, ಜನಸಂಘ ಮತ್ತು ಅವರ ರಾಜಕೀಯ ಮುಂದಾಳುಗಳು ಭಾರತೀಯ ಸಂವಿಧಾನವನ್ನು ಬಲವಾಗಿ ವಿರೋಧಿಸಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ.

ಬಿಜೆಪಿಯ ಸೈದ್ಧಾಂತಿಕ ಗುರುವಾಗಿರುವ ಆರ್‌ಎಸ್‌ಎಸ್ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿರುವ ಮಲ್ಲಿಕಾರ್ಜುನ ಖರ್ಗೆ, ತಮ್ಮ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲು ನವೆಂಬರ್ 30, 1950ರ ಆರ್‌ಎಸ್‌ಎಸ್ ಪ್ರಕಟಣೆಯ ‘ಆರ್ಗನೈಸರ್’ನ ಲೇಖನವನ್ನು ಉಲ್ಲೇಖಿಸಿದ್ದಾರೆ. ಇದು ಸಂವಿಧಾನಕ್ಕೆ ಆರ್​ಎಸ್​ಎಸ್​ ವಿರೋಧವನ್ನು ತೋರಿಸಿದೆ ಎಂದು ಹೇಳುತ್ತದೆ, ಅದರಲ್ಲಿ ಭಾರತೀಯತೆಯ ಕೊರತೆಯಿದೆ ಎಂದು ಹೇಳುತ್ತದೆ ಎಂದಿದ್ದಾರೆ.

ಸುಳ್ಳು ಹೇಳುವುದು ಮತ್ತು ಜನರನ್ನು ದಾರಿ ತಪ್ಪಿಸುವುದು ಪ್ರಧಾನಿ ಮೋದಿಯ ಅಭ್ಯಾಸವಾಗಿದೆ ಎಂದು ಅವರು ಹೇಳಿದ್ದಾರೆ.

Join Whatsapp