ಎಬಿವಿಪಿ ಕಾರ್ಯಕರ್ತರಿಂದ ಪೊಲೀಸರಿಗೆ ನಿಂದನೆ : ವೀಡಿಯೋ ವೈರಲ್

Prasthutha|

ಲಕ್ನೋ: ಎಬಿವಿಪಿ ಕಾರ್ಯಕರ್ತರು ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಅನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವ  ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

- Advertisement -

ಈ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಕೊತ್ವಾಲಿಯಲ್ಲಿ ನಡೆದಿದೆ. ಎಬಿವಿಪಿ ಕಾರ್ಯಕರ್ತರು ಪೊಲೀಸ್ ಠಾಣೆಗೆ ನುಗ್ಗಿ ಇನ್ಸ್ ಪೆಕ್ಟರ್ ಅನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಪೊಲೀಸ್ ಠಾಣೆಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕುತ್ತಿರುವುದು ವೀಡಿಯೋದಲ್ಲಿ ಕಾಣಬಹುದು.

ಎಬಿವಿಪಿ ನಾಯಕ, ಹರಿ ಸಿಂಗ್ ಅವರ ಪುತ್ರ ಮೋಹಿತ್ ರಜಪೂತ್ ಅವರ ಮೇಲೆ ಕೆಲವರು ಹಲ್ಲೆ ನಡೆಸಿದ್ದರು. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಪೊಲೀಸ್ ಠಾಣೆ ಪ್ರವೇಶಿಸಿ ಗದ್ದಲ ಸೃಷ್ಟಿಸಿದ್ದಾರೆ ಎನ್ನಲಾಗಿದೆ.

- Advertisement -

ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದರೂ, ಅವರ ವಿರುದ್ಧ ಪೊಲೀಸರು ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನೆಟ್ಟಿಗರು ಟ್ವೀಟ್ ಮಾಡಿದ್ದಾರೆ.

Join Whatsapp