ಕಾಲೇಜು ಪ್ರಾಂಶುಪಾಲರೊಂದಿಗೆ  ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿದ ಎಬಿವಿಪಿ ಕಾರ್ಯಕರ್ತರು

Prasthutha|

ಅಹಮದಾಬಾದ್: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಕಾರ್ಯಕರ್ತರು ಕಾಲೇಜು ಪ್ರಾಂಶುಪಾಲರೊಂದಿಗೆ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿರುವ ಘಟನೆ  ಗುಜರಾತ್ ಲಾ ಸೊಸೈಟಿ (ಜಿಎಲ್‌ಎಸ್) ವಿಶ್ವವಿದ್ಯಾಲಯ ಅಧೀನದ ಅಹಮದಾಬಾದ್ ನ ಎಚ್‌ಎ ಕಾಲೇಜಿನಲ್ಲಿ ನಡೆದಿದೆ.

- Advertisement -

ಕೆಲವು ದಿನಗಳ ಹಿಂದೆ ತರಗತಿ ನಡೆಯುತ್ತಿರುವಾಗ ಕೆಲವು ವಿದ್ಯಾರ್ಥಿಗಳು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಲು ಪ್ರಾರಂಭಿಸಿದ್ದರು. ಹೀಗಾಗಿ ಶಿಕ್ಷಕರು ವಿದ್ಯಾರ್ಥಿಗಳನ್ನು ಪ್ರಾಂಶುಪಾಲ ಸಂಜಯ್ ವಕೀಲರ ಬಳಿ ಕರೆದೊಯ್ದಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ  ಎಬಿವಿಪಿ ಕಾರ್ಯಕರ್ತರು ಪ್ರಾಂಶುಪಾಲರನ್ನೇ ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ. ಮಾತ್ರವಲ್ಲ ತರಗತಿಯಲ್ಲಿ ತೊಂದರೆ ಸೃಷ್ಟಿಸಿದ ವಿದ್ಯಾರ್ಥಿಗಳ ಬಳಿಯೂ ಕ್ಷಮೆ ಕೇಳುವಂತೆ ಎಬಿವಿಪಿ ಕಾರ್ಯಕರ್ತರು ಪ್ರಾಂಶುಪಾಲರೊಂದಿಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಎಬಿವಿಪಿ ಕಾರ್ಯಕರ್ತರ ವಿರುದ್ಧ ಕ್ರಮಕೈಗೊಳ್ಳಲು ಒತ್ತಾಯಿಸಲಾಗಿದೆ.

Join Whatsapp