ಬೆಂಗಳೂರು: ಜುಲೈ.5ರಂದು ನಡೆಸಿದ್ದಂತ ಎಸಿಬಿ ದಾಳಿಯಲ್ಲಿ ಅಕ್ರಮ ಆಸ್ತಿ ಪತ್ತೆಯಾದ ಹಿನ್ನಲೆಯಲ್ಲಿ, ಶಾಸಕ ಜಮೀರ್ ಅಹ್ಮದ್ ಖಾನ್ ಗೆ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟಿಸ್ ನೀಡಿದೆ.
ಈ ಸಂಬಂಧ ಬೆಂಗಳೂರಿನ ಎಸಿಬಿ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದು, ಶೀಘ್ರವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ. ಹೀಗಾಗಿ ಈಗ ಶಾಸಕ ಜಮೀರ್ ಅಹ್ಮದ್ ಗೆ ಸಂಕಷ್ಟ ಎದುರಾಗಿದೆ.
ಶಾಸಕ ಜಮೀರ್ ಅಹ್ಮದ್ ಖಾನ್ ಮನೆ, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ 87.54 ಕೋಟಿ ಅಕ್ರಮ ಆಸ್ತಿ-ಪಾಸ್ತಿ ಪತ್ತೆಯಾಗಿತ್ತು. ದಾಳಿಯ ಬಳಿಕ ವಿಚಾರಣೆಗೆ ಹಾಜರಾಗುವಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಎಸಿಬಿ ಸೂಚಿಸಿತ್ತು. ಆದ್ರೇ ಬಕ್ರೀದ್ ಹಬ್ಬದ ಬಳಿಕ ವಿಚಾರಣೆಗೆ ಹಾಜರಾಗೋದಾಗಿ ತಿಳಿಸಿದ್ದರು. ಇದೀಗ ಹಬ್ಬದ ಬಳಿಕ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.