Home ಟಾಪ್ ಸುದ್ದಿಗಳು ಬಿಡಿಎ ಕಚೇರಿ ಮೇಲೆ ಎಸಿಬಿ ದಾಳಿ: ನಾಲ್ವರು ಅಧಿಕಾರಿಗಳ ವಿರುದ್ಧ ಎಫ್ ಐಆರ್

ಬಿಡಿಎ ಕಚೇರಿ ಮೇಲೆ ಎಸಿಬಿ ದಾಳಿ: ನಾಲ್ವರು ಅಧಿಕಾರಿಗಳ ವಿರುದ್ಧ ಎಫ್ ಐಆರ್

ಬೆಂಗಳೂರು: ಇತ್ತೀಚೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಕಚೇರಿ ಮೇಲೆ ನಡೆದ ಭ್ರಷ್ಟಾಚಾರ ನಿಗ್ರಹ ದಳ -ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ.


ಬಿಡಿಎ ಭೂಸ್ವಾಧೀನ ವಿಭಾಗದ ಉಪ ಕಾರ್ಯದರ್ಶಿ 1, 2, 3, 4 ಸೇರಿ ಇತರರ ವಿರುದ್ಧ ಎಸಿಬಿ ಎಫ್ಐಆರ್ ದಾಖಲಾಗಿದೆ. ಆದರೆ ಅಧಿಕಾರಿಗಳ ಹೆಸರುಗಳನ್ನು ಎಫ್ಐಆರ್ನಲ್ಲಿ ಉಲ್ಲೇಖ ಮಾಡಿಲ್ಲ. ಕಳೆದ ನ.23ರಂದು ಬಿಡಿಎ ಕೇಂದ್ರ ಕಚೇರಿ ಆರ್.ಟಿ ನಗರ, ವಿಜಯನಗರ, ಹೆಚ್.ಎಸ್.ಆರ್ ಲೇಔಟ್, ಬನಶಂಕರಿ ಸೇರಿದಂತೆ ಐದು ಕಡೆ ದಾಳಿ ನಡೆಸಿ ಕಚೇರಿಗಳಿಂದ ಮಹತ್ವದ ದಾಖಲಾತಿಗಳನ್ನು ಜಪ್ತಿ ಮಾಡಲಾಗಿತ್ತು.
ಬಿಡಿಎ ಭೂಸ್ವಾಧೀನ ಪರಿಹಾರ ಪಾವತಿ ವೇಳೆ ಸುಳ್ಳು ಮಾಹಿತಿ ನೀಡಿ ಪರಿಹಾರವನ್ನು ಕಬಳಿಸಿರುವುದು, ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿ, ಭಾರತ್ ಎಚ್ ಬಿಸಿಎಸ್ ಲೇಔಟ್ ನಾಗರಿಕ ನಿವೇಶನಗಳನ್ನು ಷರತ್ತು ಉಲ್ಲಂಸಿ ಹಂಚಿಕೆ ಮಾಡಿದ್ದು ಕಂಡುಬಂದಿತ್ತು.


ಅಲ್ಲದೆ, ಹೆಚ್ ಎಸ್ ಆರ್ ಲೇಔಟ್ 3ನೇ ಸೆಕ್ಟರ್ ನಲ್ಲಿ ಅನುಮೋದಿತ ನಕ್ಷೆ ರೀತ್ಯ ಕಟ್ಟಡ ನಿರ್ಮಿಸದೆ ನಿಯಮ ಉಲ್ಲಂಸಿದರೂ ಕ್ರಮ ಕೈಗೊಳ್ಳದಿರುವುದನ್ನು ದಾಳಿ ವೇಳೆ ಪತ್ತೆಹಚ್ಚಲಾಗಿತ್ತು. ಈ ಆರೋಪದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ

Join Whatsapp
Exit mobile version