ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಎಸಿಬಿ ದಾಳಿ: ಬೆಂಬಲಿಗರ ಪ್ರತಿಭಟನೆ

Prasthutha|

ಮೈಸೂರು: ಚಾಮರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಬಿ. ಝಡ್ ಜಮೀರ್ ಅಹ್ಮದ್ ಅವರ ಮನೆ ಮೇಲೆ ಎಸಿಬಿ ದಾಳಿ ಖಂಡಿಸಿ, ಮೈಸೂರಿನ ನ್ಯಾಯಾಲಯದ ಮುಂಭಾಗದಲ್ಲಿ ಅವರ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

- Advertisement -

ರಾಜ್ಯ ಸರ್ಕಾರ ಎಸಿಬಿಯನ್ನು ಕೈಗೊಂಬೆ ಮಾಡಿಕೊಂಡು ರಾಜ್ಯದ ಕಾಂಗ್ರೆಸ್ ಶಾಸಕರನ್ನು ಹಣಿಯಲು ಪ್ರಯತ್ನಿಸುತ್ತಿದೆ. ಇದಕ್ಕೆಲ್ಲ ಕಾಂಗ್ರೆಸ್ ಪಕ್ಷ ಕುಗ್ಗುವುದಿಲ್ಲ. ನಾವೆಲ್ಲ ಶಾಸಕರ ಜಮೀರ್ ಅಹ್ಮದ್ ಖಾನ್ ಅವರ ಜೊತೆಗಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಬೆಂಬಲಿಗನೋರ್ವ ಮೈಮೇಲೆ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಆತನನ್ನು ವಶಕ್ಕೆ ಪಡೆದು ಅನಾಹುತ ತಪ್ಪಿಸಿದರು.

- Advertisement -

ಈ ಸಂದರ್ಭದಲ್ಲಿ ಮಾಜಿ ಮೇಯರ್ ಅಯೂಬ್ ಖಾನ್, ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷ ಗ್ಯಾಸ್ ಅಹ್ಮದ್ ಅಕ್ರಂ, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿ ಬ್ರಾಡ್ ವೇ ಕಿರಣ್, ಅಲ್ಪ ಸಂಖ್ಯಾತರ ಮುಖಂಡ ಕೈಸರ್ ಅಹ್ಮದ್, ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ಅಧ್ಯಕ್ಷ ಹಿನಕಲ್ ಪ್ರಕಾಶ್, ಪಾಲಿಕೆ ಸದಸ್ಯರಾದ ಅಯಾಜ್ ಪಂಡು, ಸುನೀಲ್, ಮುಖಂಡರಾದ ಪವನ್ ಸಿದ್ದರಾಮ, ಮಾಜಿ ಸದಸ್ಯ ಎಂ ಸಿ ಚಿಕ್ಕಣ್ಣ, ಲೋಕೇಶ್ ಮಾದಾಪುರ, ಚಂದ್ರು ಶಿವಣ್ಣ, ಮೈಸೂರು ಬಸವಣ್ಣ, ಮೇಟಗಳ್ಳಿ ಸೈಯದ್ ಹಮೀದ್ ಹಾಗೂ ಮತ್ತಿತರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಹಾಜರಿದ್ದರು.

Join Whatsapp