ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮಾಣಿ ಸಮೀಪದ ಸೂರಿಕುಮೇರು ಬಳಿ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾಗಿದ್ದು, ಭಾರೀ ಅನಾಹುತವೊಂದು ತಪ್ಪಿ ಹೋಗಿ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಮಂಗಳೂರಿನಿಂದ ಬೆಂಗಳೂರಿಗೆ ಸಾಗುತ್ತಿದ್ದ ಗ್ಯಾಸ್ ತುಂಬಿದ್ದ ಈ ಟ್ಯಾಂಕರ್, ಇಂದು ಬೆಳಗ್ಗಿನ ಜಾವ ಸುಮಾರು 4 ಗಂಟೆಗೆ ಚಾಲಕನ ನಿಯಂತ್ರಣ ತಪ್ಪಿ ಹೈವೆಗೆ ಸಂಪೂರ್ಣವಾಗಿ ಅಡ್ಡವಾಗಿ ಮಗುಚಿ ಬಿದ್ದಿದೆ.
ಪರಿಸರದಲ್ಲಿ ಯಾವುದೇ ಬೆಂಕಿಯ ಬಳಕೆ ಮಾಡಬಾರದು ಎಂದು ಸಾರ್ವಜನಿಕವಾಗಿ ಮಸೀದಿಯ ಧ್ವನಿ ವರ್ಧಕ ಮೂಲಕ ಘೋಷಣೆ ಮಾಡಲಾಗಿದೆ. ಇದೇ ವೇಳೆ ಕೂಡಲೇ ಎಚ್ಚೆತ್ತುಕೊಂಡ ಪರಿಸರದ ಜನತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರು.
ವಿಟ್ಲ ಠಾಣಾ ಪೋಲಿಸರು ಸ್ಥಳಕ್ಕೆ ಆಗಮಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ. ಯಾವುದೇ ಗ್ಯಾಸ್ ಸೋರಿಕೆ ಆಗದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ ಹೋಗಿದೆ. ಇದೀಗ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.