Home ಟಾಪ್ ಸುದ್ದಿಗಳು ಭೀಕರ ಅಪಘಾತ | ಮದುವೆ ಮುಗಿಸಿ ಹಿಂದಿರುಗುತ್ತಿದ್ದ 8 ಮಂದಿ ಸಾವು

ಭೀಕರ ಅಪಘಾತ | ಮದುವೆ ಮುಗಿಸಿ ಹಿಂದಿರುಗುತ್ತಿದ್ದ 8 ಮಂದಿ ಸಾವು

ಕತಿಹಾರ್ : ಟ್ರಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದಿದ್ದು, ಸುಮಾರು ಎಂಟು ಮಂದಿ ಮೃತಪಟ್ಟಿರುವ ಘಟನೆ ಕತಿಹಾರ್ ನಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ಭೀಕರ ಅಪಘಾತದಲ್ಲಿ ಇನ್ನೂ ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಮೃತರು ಹಾಗೂ ಗಾಯಾಳುಗಳು ಪಶ್ಚಿಮ ಬಂಗಾಳ ಮೂಲದವರಾಗಿದ್ದು, ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಿಂದಿರುಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Join Whatsapp
Exit mobile version