ಉಪ್ಪಿನಂಗಡಿ: ಬೈಕ್’ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ನವಾಝ್ ಮೃತ್ಯು

Prasthutha|

ಉಪ್ಪಿನಂಗಡಿ: ಎರಡು ಬೈಕ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

- Advertisement -

ಮೃತ ಸವಾರನನ್ನು ಬೆದ್ರೋಡಿ ನಿವಾಸಿ ನವಾಝ್ ಎಂದು ಗುರುತಿಸಲಾಗಿದೆ. ನವಾಝ್ ಗಾರೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಗಾಯಗೊಂಡಿರುವ ಸಹ ಸವಾರನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp