ಬಂಟ್ವಾಳ | ಕಾರುಗಳ ನಡುವೆ ಅಪಘಾತ; ನಾಲ್ವರಿಗೆ ಗಾಯ

Prasthutha|

- Advertisement -

ಬಂಟ್ವಾಳ: ಕಾರುಗಳ ನಡುವೆ ಅಪಘಾತ ಸಂಭವಿಸಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಪರ್ಲ ಚರ್ಚ್ ಸಮೀಪ ನಡೆದಿದೆ.

ಎರಡು ಕಾರುಗಳು ವಗ್ಗದಿಂದ ಬರುತ್ತಿದ್ದು, ಪರ್ಲ ಚರ್ಚ್ ಬಳಿಗೆ ಬರುತ್ತಿದ್ದಂತೆ ಒಮ್ನಿ ಕಾರು ಚರ್ಚ್ ಗೆ ಹೋಗುವ ಉದ್ದೇಶದಿಂದ ಕಾರನ್ನು ತಿರುಗಿಸುವ ವೇಳೆ ವೇಗವಾಗಿ ಬಂದ ಸ್ವಿಫ್ಟ್ ಕಾರು ಹಿಂಬದಿಯಿಂದ ಒಮ್ಮಿ ಕಾರಿಗೆ ಡಿಕ್ಕಿ ಹೊಡೆದಿದೆ.

- Advertisement -

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.