ಮಂಗಳೂರು | ಬೈಕ್, ಆಟೋ ರಿಕ್ಷಾ ನಡುವೆ ಭೀಕರ ಅಪಘಾತ: ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

Prasthutha|

ಕಿನ್ನಿಗೋಳಿ: ಬೈಕ್ ಹಾಗೂ ಆಟೋ ರಿಕ್ಷಾ ನಡುವೆ ರಸ್ತೆ ಅಪಘಾತ ಸಂಭವಿಸಿದ ಘಟನೆ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಕಚೇರಿಯ ಮುಂಭಾಗದ ಪೆಟ್ರೋಲ್ ಪಂಪ್ ಬಳಿ ನಡೆದಿದೆ.

- Advertisement -

ಗಾಯಗೊಂಡ ಆಟೋ ರಿಕ್ಷಾ ಚಾಲಕನನ್ನು ಆಸೀಮ್ ಎಂದು ತಿಳಿದು ಬಂದಿದ್ದು, ಬೈಕ್ ಚಾಲಕನನ್ನು ಪ್ರೇಮ್ ಎಂದು ಗುರುತಿಸಲಾಗಿದೆ.

ಶನಿವಾರ ಮಧ್ಯಾಹ್ನ 1.44 ಸುಮಾರಿಗೆ ಪೆಟ್ರೋಲ್ ಪಂಪಿನಿಂದ ಮೂರುಕಾವೇರಿ ಕಡೆಗೆ ತೆರಲುತ್ತಿದ್ದ ವೇಳೆ ಮುಂಭಾಗದಿಂದ ಆಗಮಿಸಿದ ಆಟೋ ರಿಕ್ಷಾ ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟರೆ, ಆಟೋ ರಿಕ್ಷಾವು ರಸ್ತೆ ಬದಿಗೆ ಸರಿದಿದೆ.

- Advertisement -

ಅಪಘಾತದಿಂದ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp