ಆಟೋಗೆ ಅಪರಿಚಿತ ವಾಹನ ಡಿಕ್ಕಿ: 9 ಮಂದಿ ಮೃತ್ಯು

Prasthutha|

- Advertisement -

ಲಖಿಸರಾಯ್: ಅಪರಿಚಿತ ವಾಹನವೊಂದು ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಮೃತಪಟ್ಟಿರುವ ಘಟನೆ ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿ ನಡೆದಿದೆ.

ಲಖಿಸರಾಯ್-ಸಿಕಂದ್ರ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಆಟೋ ಲಖಿಸರಾಯ್‌ನಿಂದ ಸಿಕಂದ್ರ ಕಡೆಗೆ ಹೋಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಅಪಘಾತದ ವೇಳೆ ಆಟೋರಿಕ್ಷಾದಲ್ಲಿ 15 ಮಂದಿ ಇದ್ದರು. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಅಪಘಾತದ ರಭಸಕ್ಕೆ ಆಟೊರಿಕ್ಷಾ ಜಖಂಗೊಂಡಿತ್ತು.

ಮೃತ ಒಂಬತ್ತು ಮಂದಿಯಲ್ಲಿ ಒಬ್ಬನನ್ನು ಚಾಲಕ ಮನೋಜ್ ಕುಮಾರ್ ಎಂದು ಗುರುತಿಸಲಾಗಿದೆ. ಅಪಘಾತದ ಮಾಹಿತಿ ಪಡೆದ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.



Join Whatsapp