ಬೆಳಗಾವಿ: ದೇವಸ್ಥಾನಕ್ಕೆ ಹೊರಟಿದ್ದ ವಾಹನ ಮರಕ್ಕೆ ಡಿಕ್ಕಿ ಹೊಡೆದು 6 ಮಂದಿ ಮೃತ್ಯು

Prasthutha|

ಬೆಳಗಾವಿ: ದೇವಸ್ಥಾನಕ್ಕೆ ಹೊರಟಿದ್ದ ವಾಹನ ಮರಕ್ಕೆ ಡಿಕ್ಕಿ ಹೊಡೆದು 6 ಮಂದಿ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ಜ.4 ರ ಮಧ್ಯರಾತ್ರಿ ನಡೆದಿದೆ.

- Advertisement -

ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೊರಟಿದ್ದ ವಾಹನ ಆಲದ ಮರಕ್ಕೆ ಡಿಕ್ಕಿ ಹೊಡೆದಿದ್ದು, ವಾಹನದಲ್ಲಿದ್ದ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ಹನುಮವ್ವ ಮ್ಯಾಗಾಡಿ (25), ದೀಪಾ (31), ಸವಿತಾ (17), ಸುಪ್ರೀತಾ (11), ಮಾರುತಿ (42) ಮತ್ತು ಇಂದ್ರವ್ವ(24) ಮೃತಪಟ್ಟಿದ್ದಾರೆ.

ಐವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಘಟನಾ ಸ್ಥಳಕ್ಕೆ ಧಾವಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಅವರು ಘಟನೆ ನಡೆದ ಸ್ಥಳದ ಪರಿಶೀಲನೆ ನಡೆಸಿದರು. ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp