ಬೆಂಗಳೂರು | ಏರ್ ಪೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ : ಮೂವರ ದಾರುಣ ಸಾವು

Prasthutha|

ಬೆಂಗಳೂರು; ರಾಜಧಾನಿ ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

- Advertisement -

ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಕ್ರಾಸ್ ಬಳಿ ಅಪಘಾತ ನಡೆದಿದ್ದು, ಭಾರಿ ಮಳೆಯಿಂದಾಗಿ ಡಿವೈಡರ್’ಗೆ ಡಿಕ್ಕಿಯಾದ ಕಾರು, ಮತ್ತೊಂದು ರಸ್ತೆಗೆ ನೆಗೆದು ಬಳಿಕ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿನ ಮೇಲೆ ಬಿದ್ದಿದೆ.
ಅಪಘಾತದ ತೀವ್ರತೆಗೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಮಳೆ ಬರುತ್ತಿದ್ದ ಹಿನ್ನೆಲೆ ರಸ್ತೆ ಸರಿಯಾಗಿ ಕಾಣದೇ ಕಾರು ಡಿವೈಡರ್ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.


ಚಿಕ್ಕಜಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Join Whatsapp