ಮುಲ್ಕಿ: ಕಾರಿಗೆ ಖಾಸಗಿ ಬಸ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ

Prasthutha|

ಮಂಗಳೂರು: ಕಾರಿಗೆ ಖಾಸಗಿ ಬಸ್ಸೊಂದು ಡಿಕ್ಕಿಯೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮುಲ್ಕಿ ಹಳೆಯಂಗಡಿ ಬಳಿ‌ ಕಳೆದ ರಾತ್ರಿ ಸಂಭವಿಸಿದೆ.

- Advertisement -

ಮುಕ್ಕ ನಿವಾಸಿಗಳಾದ ವಸಂತ (64), ಬುಜಂಗ (62) ಮೃತಪಟ್ಟವರು ಎಂದು ಗುರುತಿಸಲಾಗಿದ್ದು ಕೆ. ಬಾಲಕೃಷ್ಣ ಎಂಬವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.



Join Whatsapp