ಉಪ್ಪಿನಂಗಡಿ : ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಎರಡನೇ ತಿರುವಿನಲ್ಲಿ ಅನಿಲ ತುಂಬಿದ ಟ್ಯಾಂಕರ್ ಮಗುಚಿ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡ ಘಟನೆ ವರದಿಯಾಗಿದೆ.
ಸಕಲೇಶಪುರ ಠಾಣಾ ವ್ಯಾಪ್ತಿಯ ಶಿರಾಡಿ ಎರಡನೇ ತಿರುವಿನಲ್ಲಿ ಟ್ಯಾಂಕರ್ ಮಗುಚಿಬಿದ್ದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಅನಿಲ ಹೇರಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಮಗುಚಿಬಿದ್ದಿದೆ. ಸಂಚಾರ ಸ್ಥಗಿತವಾಗಿದ್ದು, ರಾತ್ರಿ ವೇಳೆ ಸಂಚಾರ ಆರಂಭಗೊಳ್ಳುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.