ಅಡ್ಡೂರು: ಲಾರಿ – ಆಟೋ ರಿಕ್ಷಾ ನಡುವೆ ಅಪಘಾತ; ಗಾಯಗೊಂಡಿದ್ದ ಬಾಲಕಿ ಮೃತ್ಯು

Prasthutha: January 25, 2022

ಮಂಗಳೂರು: ನಗರದ ಹೊರವಲಯದ ಅಡ್ಡೂರು ಸಮೀಪದ ಕಾಜಿಲ ಎಂಬಲ್ಲಿ ಸೋಮವಾರ ಟಿಪ್ಪರ್ ಮತ್ತು ರಿಕ್ಷಾ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಮೃತ ಬಾಲಕಿಯನ್ನು ಕರಿಯಂಗಳ ಗ್ರಾಮದ ಪಳ್ಳಿಪಾಡಿಯ ಆಸ್ನಾ (16) ಎಂದು ಗುರುತಿಸಲಾಗಿದೆ.

ಆಸ್ನಾ ತನ್ನ ತಾಯಿ ರೆಹನಾರೊಂದಿಗೆ ರಿಕ್ಷಾದಲ್ಲಿ ಗುರುಪುರ ಕೈಕಂಬದತ್ತ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಕೈಕಂಬದತ್ತ ಹೋಗುತ್ತಿದ್ದಾಗ ಪೊಳಲಿ ದ್ವಾರದಿಂದ ಅಡ್ಡೂರಿನತ್ತ ಅತಿ ವೇಗ ಮತ್ತು ಅಜಾಗರೂಕತೆಯಿಂದ ರಾಂಗ್‌ ಸೈಡ್‌ನಲ್ಲಿ ಚಲಿಸುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಇದರಿಂದ ರಿಕ್ಷಾ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ರಸ್ತೆಯ ಪಕ್ಕಕ್ಕೆ ಎಸೆಯಲ್ಪಟ್ಟಿತ್ತು. ತಕ್ಷಣ ಸ್ಥಳೀಯರು ಗಂಭೀರ ಗಾಯಗೊಂಡಿದ್ದ ತಾಯಿ, ಮಗಳು ಹಾಗೂ ರಿಕ್ಷಾ ಚಾಲಕನನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಚಿಕಿತ್ಸೆ ಫಲಕರಿಯಾಗದೆ ಮಂಗಳವಾರ ಬಾಲಕಿ ಆಸ್ನಾ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸದ್ಯ ಅಸ್ನಾ ಮಿಜಾರು ಸಮೀಪದ ತೋಡಾರಿನ ಆದರ್ಶ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದಳು. ಘಟನೆಯ ಕುರಿತು ಬಜ್ಪೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!