ಬಳ್ಳಾರಿ: ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಟ್ರ್ಯಾಕ್ಸ್ ನ ಆಕ್ಸಲ್ ಕಟ್ ಆಗಿ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗಿನ ಜಾವ ನಡೆದಿದೆ.
ಮೃತರನ್ನು ಚಾಲಕ ಸಿದ್ದಯ್ಯ ಕಾಳಗಿ (48), ಕಲ್ಲವ್ವ (60), ಕುಂತವ್ವ (50), ನೀಲಮ್ಮ (54) ಮತ್ತು ಲಕ್ಷ್ಮೀಬಾಯಿ (60) ಎಂದು ಗುರುತಿಸಲಾಗಿದೆ.
ಮೃತರೆಲ್ಲರೂ ವಿಜಯಪುರ ಜಿಲ್ಲೆಯ ನಿಡಗುಂಡಿ ಗ್ರಾಮದವರು. ಇವರು ತಮ್ಮ ಗ್ರಾಮದ ಸುತ್ತಮುತ್ತಲಿನ ಜನರು ಸೇರಿಕೊಂಡು ರಾಮೇಶ್ವರಕ್ಕೆ ಪ್ರಯಾಣ ಬೆಳೆಸಿದ್ದರು.
ಟ್ರಾಕ್ಸ್ನ ಆಕ್ಸಲ್ ಕಟ್ ಆಗಿ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಈ ಸಂಬಂಧ ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.