ಕುಷ್ಟಗಿ ಬಳಿ ಅಪಘಾತ| ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ: ಸಿಎಂ ಘೋಷಣೆ

Prasthutha|

ಬೆಂಗಳೂರು: ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ವ್ಯಾಪ್ತಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯ ಕಲಕೇರಿ ಬಳಿ ಇಂದು (ಭಾನುವಾರ) ಸಂಜೆ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ ₹2ಲಕ್ಷ ಪರಿಹಾರ ಘೋಷಿಸಿದ್ದಾರೆ.

- Advertisement -

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಅತಿಯಾದ ವೇಗ, ಅಜಾಗರೂಕತೆಗಳೇ ಇಂಥ ಅಪಘಾತಗಳಿಗೆ ಕಾರಣ, ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ, ಸುರಕ್ಷಿತವಾಗಿರಿ ಎಂದು ಸಿಎಂ ತಿಳಿಸಿದ್ದಾರೆ.

- Advertisement -

‘ವೇಗವಾಗಿ ಬರುತ್ತಿದ್ದ ಕಾರು ಟಯರ್‌ ಸಿಡಿದು ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.



Join Whatsapp