Home ಟಾಪ್ ಸುದ್ದಿಗಳು ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ : ಇಬ್ಬರು ಮೃತ್ಯು

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ : ಇಬ್ಬರು ಮೃತ್ಯು

ಚನ್ನಪಟ್ಟಣ : ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.

ಚನ್ನಪಟ್ಟಣದ ದೇವರಹೊಸಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಸಾವಿಗೀಡಾದ ಬಾಲಕಿಯರಿಬ್ಬರು ಒಂದೇ ಕುಟುಂಬದವರಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟವರಲ್ಲಿ ಒಬ್ಬ ಬಾಲಕಿಯ ವಯಸ್ಸು 13, ಮತ್ತೊಬ್ಬಳದ್ದು 20.  ಹೆಚ್.ಡಿ.ಕೋಟೆಯಿಂದ ಮದುವೆ ಮುಗಿಸಿ ಬೆಂಗಳೂರಿಗೆ ವಾಪಸ್ ಬರುವ ವೇಳೆ ಅಫಘಾತ ಸಂಭವಿಸಿದೆ. ಕಾರ್ ನಲ್ಲಿ ಹೋಗುತ್ತಿದ್ದವರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.

ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರ್ ನಲ್ಲಿದ್ದ ಒಟ್ಟು 6 ಜನರಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ಹೇಳಿವೆ.

Join Whatsapp
Exit mobile version