ಮೈಸೂರು – ಬೆಂಗಳೂರು ಎಕ್ಸ್‌ ಪ್ರೆಸ್‌ ವೇಯಲ್ಲಿ ಅಪಘಾತ: ಮೂವರು ಮೃತ್ಯು

Prasthutha|

ರಾಮನಗರ: ಬೈಕ್ ಹಾಗೂ ಕಾರು ಮಧ್ಯೆ ನಡೆದ ಅಪಘಾತದಲ್ಲಿ ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ನಡೆದಿದೆ.

- Advertisement -

ಬೆಂಗಳೂರಿನಿಂದ ಮೈಸೂರಿಗೆ ಮೂವರು ಯುವಕರು ಒಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕೆಟ್ಟು ನಿಂತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ.

ಡಿಕ್ಕಿ ಹೊಡೆದು ಕೆಳಗೆ ಬಿದ್ದ ಯುವಕರ ಮೇಲೆ ವೇಗವಾಗಿ ಬಂದ ಮತ್ತೊಂದು ಕಾರು ಕೂಡಾ ಡಿಕ್ಕಿ ಹೊಡೆದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿ ರಾಮನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.