ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ಬಲೆಗೆ

Prasthutha|

ಚಿಕ್ಕಮಗಳೂರು: ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನ್ನು ಚಿಕ್ಕಮಗಳೂರಿನ ಪೊಲೀಸರು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಪ್ರಕರಣವು ನ್ಯಾಯಾಲಯದಲ್ಲಿ ಖುಲಾಸೆಗೊಂಡ ನಂತರ, 3 ವರ್ಷ 9 ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ಉತ್ತರ ಪ್ರದೇಶ ಮೂಲದ ಆರೋಪಿ ಸುಧೀರ್ ಅಲಿಯಾಸ್ ಸುದೀರ್ ಕುಮಾರ್ ಎಂಬಾತನನ್ನು 2016 ರಲ್ಲಿ ಬಿಡುಗಡೆ ಮಾಡಲಾಗಿತ್ತು.

- Advertisement -


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿರ್ಯಾದುದಾರರು ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದ ಮೇರೆಗೆ, ಘನ ನ್ಯಾಯಾಲಯವು ಆರೋಪಿ ಸುಧೀರ್ ಕುಮಾರ್ ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ನೋಟಿಸ್, ವಾರೆಂಟ್ ಜಾರಿ ಮಾಡಿತ್ತು.


ಆದರೆ ಈತನು ತಲೆಮರೆಸಿಕೊಂಡಿದ್ದರಿಂದ ವಾರೆಂಟ್ ಜಾರಿ ಆಗಿರಲಿಲ್ಲ. ಈ ಕುರಿತಾಗಿ ಮಲ್ಲಂದೂರು ಪೊಲೀಸ್ ಠಾಣೆಯ ಪಿ.ಎಸ್.ಐ. ಶ್ರೀ. ರವೀಶ್, ಎ.ಎಸ್.ಐ. ಶ್ರೀ. ವಿಶ್ವನಾಥ್ ಮತ್ತು ಸಿಬ್ಬಂದಿ ಶ್ರೀ. ಅಲಾನ್ ರವರು ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸಲು ನವದೆಹಲಿ ಮತ್ತು ಉತ್ತರ ಪ್ರದೇಶಕ್ಕೆ ಹೋಗಿದ್ದು. ನಂತರ ಈತ ಬೆಂಗಳೂರಿಗೆ ಬರುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಬುಧವಾರ ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.

- Advertisement -