Home ಟಾಪ್ ಸುದ್ದಿಗಳು ಸಲ್ಮಾನ್ ಖಾನ್ ಮನೆ ಎದುರು ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

ಸಲ್ಮಾನ್ ಖಾನ್ ಮನೆ ಎದುರು ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

ಮುಂಬೈ: ನಟ ಸಲ್ಮಾನ್ ಖಾನ್ ಮನೆ ಎದುರು ನಡೆದಿದ್ದ ಗುಂಡಿನ ದಾಳಿಯ ಆರೋಪಿ ಅನುಜ್ ಪೊಲೀಸ್ ಕಸ್ಟಡಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.


ಸಲ್ಮಾನ್ ಮನೆ ಮೇಲೆ ಗುಂಡು ಹಾರಿಸಿದ ಶೂಟರ್ ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ ಆರೋಪ ಅನುಜ್ ಮೇಲಿದೆ. ಸದ್ಯ ಅನುಜ್ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಸಲ್ಮಾನ್ ಖಾನ್ ಮನೆಯಲ್ಲಿ ಫೈರಿಂಗ್ ಪ್ರಕರಣ ದಿನಕ್ಕೊಂದು ಹೊಸ ರೂಪ ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಆರೋಪಿಗಳಾದ ವಿಕ್ಕಿ ಗುಪ್ತಾ (24), ಸಾಗರ್ ಪಾಲ್ (21) ಮತ್ತು ಅನುಜ್ ಥಾಪನ್ (32) ಪೊಲೀಸರ ವಶದಲ್ಲಿದ್ದಾರೆ.

Join Whatsapp
Exit mobile version