ಕಸ್ಟಡಿಯಲ್ಲಿದ್ದ ಅರೋಪಿ ಸಾವು: ಬಿಗುವಿನ‌ ವಾತಾವರಣ

Prasthutha|

ದಾವಣಗೆರೆ : ಜಿಲ್ಲೆಯ ಚನ್ನಗಿರಿ ಪೊಲೀಸರ ಕಸ್ಟಡಿಯಲ್ಲಿದ್ದ ಅರೋಪಿ ಸಾವನ್ನಪ್ಪಿದ್ದು, ವಿಷಯ ತಿಳಿದು ವ್ಯಕ್ತಿಯ ಸಂಬಂಧಿಕರು ಠಾಣೆಗೆ ನುಗ್ಗಿ ಠಾಣೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

- Advertisement -

ಒಸಿ ಆಡಿಸುತ್ತಿದ್ದ ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿ ಅದಿಲ್ (30) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದರು.

ಸಂಜೆ ಪೊಲೀಸ್ ಠಾಣೆಗೆ ಕರೆತರಲಾಗಿದ್ದ ಆರೋಪಿಗೆ ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಕುಸಿದು ಬಿದ್ದಿದ್ದು, ಆತನನನ್ನು ಅಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಆರೋಪಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

- Advertisement -

ಈ ಸಾವಿಗೆ ಪೊಲೀಸರೇ ಕಾರಣ ಎಂದು ಅರೋಪಿಸಿ ಸಂಬಂಧಿಕರು ಗಲಾಟೆ ನಡೆಸಿದ್ದು,, ಠಾಣೆಯ ಮುಂಭಾಗ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು

Join Whatsapp