ಯುವತಿ ಮೇಲೆ ಆ್ಯಸಿಡ್ ದಾಳಿ: ಸ್ವಾಮೀಜಿ ವೇಷಧರಿಸಿ ತಲೆಮರೆಸಿಕೊಂಡಿದ್ದ ನಾಗೇಶ್ ಬಂಧನ

Prasthutha|

ಬೆಂಗಳೂರು: ಕಳೆದ ಏಪ್ರಿಲ್ 28 ರಂದು ಸುಂಕದಕಟ್ಟೆಯಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ್‌ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -


ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ಈತ 16 ದಿನಗಳ ಬಳಿಕ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ತಲೆಮರೆಸಿಕೊಂಡಿದ್ದ ಆತನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.


ಯಾರಿಗೂ ಸಿಗಬಾರದೆಂದು ನಾಗೇಶ್ ತಮಿಳುನಾಡಿನಲ್ಲಿ ಸ್ವಾಮೀಜಿ ವೇಷಧರಿಸಿ ತಲೆಮರೆಸಿಕೊಂಡಿದ್ದ. ಆದರೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Join Whatsapp