ಹುಬ್ಬಳ್ಳಿ: ಯುವಕನನ್ನು ಹತ್ಯೆಗೈದು ಪೊಲೀಸರಿಂದ ಕೆಲವೇ ಗಂಟೆಗಳಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಹುಬ್ಬಳ್ಳಿ ಪೊಲೀಸರು ಗುಂಡೇಟು ನಿಡಿದ್ದಾರೆ.
ಆರೋಪಿಗಳಾದ ಸುದೀಪ್ ಮತ್ತು ಕಿರಣ್ ಸೇರಿ ಶಿವು ಚಂದ್ರಶೇಖರ ಕಮ್ಮಾರ ಎಂಬಾತನನ್ನು ಚಾಕು ಇರಿದು ಹತ್ಯೆಗೈದಿದ್ದರು.
ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದರು.
ಇಬ್ಬರು ಸೇರಿ ಉಳಿದ ಆರೋಪಿಗಳನ್ನು ತೋರಿಸುವುದಾಗಿ ಕರೆದೊಯ್ದು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಇಬ್ಬರ ಕಾಲಿಗೂ ಪೊಲೀಸರು ಗುಂಡೇಟು ನೀಡಿದ್ದಾರೆ.
ಇಬ್ಬರು ಆರೋಪಿಗಳನ್ನು ಹುಬ್ಬಳ್ಳಿ ಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಕಿಮ್ಸ್ ಆಸ್ಪತ್ರೆಗೆ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯ ಆರೋಗ್ಯ ಬಗ್ಗೆ ಕಮಿಷನರ್ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಇದೇ ವೇಳೆ ಗುಂಡೇಟು ತಿಂದ ಆರೋಪಿಗಳನ್ನು ಪರಿಶೀಲನೆ ನಡೆಸಿದರು.