ಬಿಜೆಪಿ ನಾಯಕನ ಹತ್ಯೆಗೈದು ಅಂತ್ಯಸಂಸ್ಕಾರಕ್ಕೆ ಹೂವಿನ ಹಾರ ಹಿಡಿದು ಬಂದ ಆರೋಪಿ ಅರೆಸ್ಟ್

- Advertisement -

ಪಾಟ್ನಾ: ಬಿಹಾರದ ಉದ್ಯಮಿ, ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಓರ್ವ ಆರೋಪಿಯನ್ನು ಅಂತ್ಯಸಂಸ್ಕಾರ ನಡೆಯುತ್ತಿದ್ದ ಸ್ಥಳದಲ್ಲೇ ಪೊಲೀಸರು ಬಂಧಿಸಿರುವ ಘಟನೆ ಭಾನುವಾರ( ನಡೆದಿದೆ.

- Advertisement -

ಬಿಹಾರದ ಕೈಗಾರಿಕೋದ್ಯಮಿ, ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರನ್ನು ಶುಕ್ರವಾರ(ಜು.4) ರಾತ್ರಿ ಸುಮಾರು 11;40 ರ ಸುಮಾರಿಗೆ ಪಾಟ್ನಾದ ಗಾಂಧಿ ಮೈದಾನ ಪ್ರದೇಶದಲ್ಲಿರುವ ಅವರ ನಿವಾಸದ ಹೊರಗೆ ಶಸ್ತ್ರಸಜ್ಜಿತ ದುಷ್ಕರ್ಮಿಯೊಬ್ಬ ಗುಂಡಿಕ್ಕಿ ಹತ್ಯೆಗೈದಿದ್ದ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹತ್ಯೆ ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು.

ಹತ್ಯೆಯಾದ ಗೋಪಾಲ್ ಖೇಮ್ಕಾ ಅವರ ಅಂತ್ಯ ಸಂಸ್ಕಾರ ಜುಲೈ 6 ರಂದು ನಡೆದಿದ್ದು ಈ ವೇಳೆ ದೊಡ್ಡ ದೊಡ್ಡ ಉದ್ಯಮಿಗಳು ಭಾಗಿಯಾಗಿದ್ದರು ಜೊತೆಗೆ ಸಂಬಂಧಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು ಈ ವೇಳೆ ಹೂವಿನ ಹಾರ ಹಿಡಿದುಕೊಂಡು ವ್ಯಕ್ತಿಯೋರ್ವ ಅಲ್ಲಿಗೆ ಬಂದಿದ್ದಾನೆ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

- Advertisement -

ಘಟನೆ ಸಂಬಂಧ ತನಿಖೆ ನಡೆಯುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

- Advertisement -


Must Read

Related Articles