ಕಡಬ | ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ಶರಣು

Prasthutha|

ಕಡಬದ ಕೋಡಿಂಬಾಳ ಎಂಬಲ್ಲಿ ಕಳೆದ ವರ್ಷ ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ಜಯಾನಂದ ಎಂಬವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ ಆರೋಪಿಯನ್ನು ಕೂಡಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕಡಬ ಪೊಲೀಸರಿಗೆ ಆದೇಶಿಸಿತ್ತು. ಆದರೆ ತಲೆಮರೆಸಿಕೊಂಡು ಪರಾರಿಯಾಗಿದ್ದ ಆರೋಪಿ ಜಯಾನಂದ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.

ತನ್ನ ಸ್ವಂತ ನಾದಿನಿಗೆ ಮತ್ತು ಪುಟ್ಟ ಮಗು ಮೇಲೆ ಆ್ಯಸಿಡ್ ದಾಳಿ ನಡೆಸಿ ಕಾರಾಗ್ರಹದಲ್ಲಿದ್ದ ಆರೋಪಿ ಜಯಾನಂದರಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿದ್ದು, ಆದರೆ ಈ ಜಾಮೀನನ್ನು ಪ್ರಶ್ನಿಸಿ ಸಂತ್ರಸ್ಥೆ ಮಹಿಳೆ ಹೈಕೋರ್ಟಿನಲ್ಲಿ ಪ್ರಶ್ನಿಸಿ ಜಾಮೀನು ರದ್ದುಪಡಿಸುವಂತೆ ಅರ್ಜಿ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ  ಜಯಾನಂದರ ಜಾಮೀನು ರದ್ದುಗೊಂಡು ಅವರನ್ನು ಕೂಡಲೇ ಬಂಧಿಸುವಂತೆ ನ್ಯಾಯಾಲಯವು ಕಡಬ ಪೊಲೀಸರಿಗೆ ಆದೇಶ ಮಾಡಿತ್ತು. ಈ ಮಧ್ಯೆ ಆರೋಪಿ ಜಯಾನಂದ ತಲೆಮರೆಸಿಕೊಂಡು ಸುಪ್ರೀಂ ಕೋರ್ಟಿನಲ್ಲಿ ನಿರೀಕ್ಷಣಾ ಜಾಮಿನಿಗೆ ಅರ್ಜಿ ಸಲ್ಲಿಸಿದ್ದ. ಆದರೆ ಈ ಅರ್ಜಿಯನ್ನು ಮಾನ್ಯ ನ್ಯಾಯಾಲಯವು ವಜಾಗೊಳಿಸಿದ್ದು, ಇದೀಗ ಜಯಾನಂದ ನ್ಯಾಯಾಲಯಕ್ಕೆ ಶರಣಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

- Advertisement -

2020ನೇ ಜನರಿ 24ರಂದು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಕೊಠಾರಿ ಎಂಬಲ್ಲಿ ಜಯಾನಂದ ಎಂಬವರು ತನ್ನ ತಮ್ಮನ ಹೆಂಡತಿ ಸ್ವಪ್ನಾ ಎಂಬವರಿಗೆ ಮತ್ತು ಅವರ ಜೊತೆಗಿದ್ದ ಪುಟ್ಟ ಮಗುವಿನ ಮೇಲೆ ಆ್ಯಸಿಡ್ ಎರಚಿದ್ದ. ಇದರಿಂದ ಸ್ವಪ್ನಾ ಹಾಗೂ ಅವರ ಮಗುವಿಗೆ ಗಾಯವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಜಯಾನಂದರವರಿಗೆ ಪುತ್ತೂರು ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿತ್ತು. ಆದರೆ ಈ ಜಾಮೀನನ್ನು ಪ್ರಶ್ನಿಸಿ ಸ್ವಪ್ನ ಆವರು ಹೈಕೋರ್ಟಿನ ಮೊರೆ ಹೋಗಿದ್ದರು. ಬಳಿಕ ಹೈಕೋರ್ಟ್ ಜಾಮೀನು ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಕೂಡಲೇ ಜಯಾನಂದನನ್ನು ಬಂಧಿಸುವಂತೆ ಕಡಬ ಪೋಲಿಸರಿಗೆ ಆದೇಶ ನೀಡಿತ್ತು. ಈ ಮಧ್ಯೆ ಆರೋಪಿ ತಲೆಮರೆಸಿಕೊಂಡಿದ್ದ. ಜಯಾನಂದ ಸುಪ್ರೀಂ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಅರ್ಜಿ ಹಾಕಿದ್ದ ಎನ್ನಲಾಗಿದೆ. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದೀಗ ಜಯಾನಂದ ನೇರವಾಗಿ ನ್ಯಾಯಾಲಯಕ್ಕೆ ಶರಣಾಗಿದ್ದು ನ್ಯಾಯಾಲಯವು ಜಯಾನಂದನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -