ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ: ದುಷ್ಕರ್ಮಿಗಳು ಪರಾರಿ

Prasthutha|

- Advertisement -

ಬೆಂಗಳೂರು: ಯುವನಕನೊಬ್ಬನ ಮೇಲೆ ಆ್ಯಸಿಡ್ ದಾಳಿ ನಡೆದಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೆ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ನಾಗೇಶ್ ಕೊಂಡ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾರೆ.

- Advertisement -

ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಾಳು ಯುವಕನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಇದು ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ 2 ದಾಳಿಯಾಗಿದೆ. ಈ ಹಿಂದೆ ನಡೆದಿದ್ದ ಆ್ಯಸಿಡ್​ ದಾಳಿ ಇಡೀ ಬೆಂಗಳೂರನ್ನು ಬೆಚ್ಚಿಬೀಳಿಸಿತ್ತು. 2022ರಲ್ಲಿ ಹಾಡಹಗಲೇ ಯುವತಿ ಮೇಲೆ ಆ್ಯಸಿಡ್​ ದಾಳಿ ನಡೆದಿತ್ತು.

ಆರೋಪಿ ನಾಗ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ. ಯುವತಿ ಮೇಲಿನ ಆ್ಯಸಿಡ್ ದಾಳಿ ಪ್ರಕರಣ ರಾಜ್ಯಾದ್ಯಂತ ಭಾರಿ ಚರ್ಚೆ ಆಗಿತ್ತು.



Join Whatsapp