ಯುವತಿ ಮೇಲೆ ಆ್ಯಸಿಡ್ ದಾಳಿ: ಆರೋಪಿ ಆ್ಯಸಿಡ್​ ನಾಗ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

Prasthutha|

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನಗರದ ಸುಂಕದಕಟ್ಟೆಯ ಯುವತಿ ಮೇಲಿನ ಆ್ಯಸಿಡ್ ದಾಳಿ ಪ್ರಕರಣದ ಚಾರ್ಜ್ ಶೀಟ್ (ಆರೋಪಪಟ್ಟಿ) ನ್ನು ಪೊಲೀಸ್ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

- Advertisement -

ಮೂರು ತಿಂಗಳ ಸುದೀರ್ಘ ತನಿಖೆಯ ಬಳಿಕ ಪೊಲೀಸರು 13ನೇ ಎಸಿಎಂಎಂ ಕೋರ್ಟ್​ಗೆ 770 ಪುಟಗಳ ಪ್ರಾಥಮಿಕ ಚಾರ್ಜ್ ಶೀಟ್ ನ್ನು ತನಿಖಾಧಿಕಾರಿಗಳು ಸಲ್ಲಿಸಿದರು.

770 ಪುಟಗಳ ಪ್ರಾಥಮಿಕ ಆರೋಪಪಟ್ಟಿಯಲ್ಲಿ 92 ಸಾಕ್ಷಿಗಳನ್ನು ಉಲ್ಲೇಖಿಸಲಾಗಿದ್ದು, ಹಾಗೆಯೇ ಇಬ್ಬರು ಪ್ರಮುಖ ಸಾಕ್ಷಿಗಳ 164 ಹೇಳಿಕೆಗಳನ್ನೂ ದಾಖಲಿಸಿಕೊಳ್ಳಲಾಗಿದೆ.

- Advertisement -

ಆರೋಪಿ ಆ್ಯಸಿಡ್​ ನಾಗ ಯುವತಿ ಮೇಲೆ ಆ್ಯಸಿಡ್ ಎರಚಿದ ಮೇಲೆ ತನ್ನ ಸಹೋದರನಿಗೆ ಕರೆ ಮಾಡಿದ್ದ ಆಡಿಯೋ ಸೇರಿ ಹಲವು ವಾಯ್ಸ್ ರೆಕಾರ್ಡ್​ಗಳನ್ನು ಎಫ್​​ಎಸ್​ಎಲ್​ಗೆ ರವಾನೆ ಮಾಡಲಾಗಿದ್ದು, ಅದು ಆರೋಪಿ ನಾಗೇಶನ ಧ್ವನಿ ಎಂಬುದು ಖಚಿತವಾಗಿದೆ. ಈ ಹಿಂದೆ ನಾಗೇಶ್ ಹಾಗೂ ಸಂತ್ರಸ್ತೆಯ ಹೇಳಿಕೆಯಲ್ಲಿ ನೀಡಿರುವ ಅಂಶಗಳು ಚಾರ್ಜ್ ಶೀಟ್​ನಲ್ಲಿ ಉಲ್ಲೇಖವಾಗಿವೆ. ಸಾಕಷ್ಟು ಸಿಸಿಟಿವಿಗಳ ಸಾಕ್ಷಿಗಳನ್ನು ಸಹ ಕೋರ್ಟ್​ಗೆ ಸಲ್ಲಿಸಲಾಗಿದೆ

Join Whatsapp