Home ಟಾಪ್ ಸುದ್ದಿಗಳು ಆರೆಸ್ಸೆಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ: ಕೇರಳದ ರಾಜ್ಯಪಾಲರ ನಡೆಯ ಕುರಿತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಿಡಿ

ಆರೆಸ್ಸೆಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ: ಕೇರಳದ ರಾಜ್ಯಪಾಲರ ನಡೆಯ ಕುರಿತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಿಡಿ

ತಿರುವನಂತಪುರಂ: ರಾಜ್ಯದ ಒಂಬತ್ತು ವಿಶ್ವವಿದ್ಯಾಲಯಗಳ ಕುಲಪತಿಗಳು ರಾಜೀನಾಮೆ ನೀಡುವಂತೆ ಆದೇಶ ನೀಡಿದ ರಾಜ್ಯಪಾಲ ಆರೀಫ್ ಮುಹಮ್ಮದ್ ಖಾನ್ ಅವರು ಆರೆಸ್ಸೆಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲ ಆರೀಫ್ ಮುಹಮ್ಮದ್ ಖಾನ್ ಅವರು ಅರೆಸ್ಸೆಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಮತ್ತು ಅವರ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ರಾಜ್ಯಪಾಲರು ಕುಲಪತಿ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ತಮ್ಮ ಅಧಿಕಾರ ಪರಿಮಿತಿಗಿಂತ ಹೆಚ್ಚಿನ ಅಧಿಕಾರವನ್ನು ಚಲಾಯಿಸುತ್ತಿದ್ದಾರೆ. ಇದು ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ವಿರುದ್ಧವಾಗಿದೆ ಮತ್ತು ಉಪಕುಲಪತಿಗಳ ಅಧಿಕಾರದ ಮೇಲಿನ ಅತಿಕ್ರಮಣವಾಗಿದೆ. ರಾಜ್ಯಪಾಲರ ಹುದ್ದೆಯು ಸರ್ಕಾರದ ವಿರುದ್ಧ ನಡೆಯುವುದಲ್ಲ, ಬದಲಾಗಿ ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುವುದಾಗಿದೆ. ಆದರೆ ಅವರು ಆರೆಸ್ಸೆಸ್ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಿಡಿಕಾರಿದ್ದಾರೆ.

ಇದಕ್ಕೂ ಮೊದಲು ಆಡಳಿತರೂಢ ಸಿಪಿಐ (ಎಂ) ರಾಜ್ಯಪಾಲರ ಕ್ರಮವನ್ನು ವಿಶ್ವವಿದ್ಯಾಲಯಗಳ ಚುಕ್ಕಾಣಿ ಹಿಡಿಯಲು ಆರೆಸ್ಸೆಸ್ ಸದಸ್ಯರನ್ನು ನೇಮಿಸುವ ಪ್ರಯತ್ನದ ಮುಂದುವರಿದ ಭಾಗ ಎಂದು ಬಣ್ಣಿಸಿತ್ತು.

ಕೇರಳದ 9 ವಿವಿಗಳ ಕುಲಪತಿಗಳು ರಾಜೀನಾಮೆ ನೀಡುವಂತೆ ನಿನ್ನೆ ತನ್ನ ಅಧಿಕೃತ ಅಧಿಸೂಚನೆಯಲ್ಲಿ ಆರೀಫ್ ಮುಹಮ್ಮದ್ ಖಾನ್ ಅವರು ಸೂಚಿಸಿದ್ದರು. ಸುಪ್ರೀಮ್ ಕೋರ್ಟ್’ನ ತೀರ್ಪನ್ನು ಎತ್ತಿ ಹಿಡಿಯುವ ಸಂದರ್ಭದಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ರಾಜಭವನದ ಮೂಲಗಳು ತಿಳಿಸಿವೆ. ಗವರ್ನರ್ ಆರೀಫ್ ಖಾನ್ ವಿವಿಯ ಕುಲಾಧಿಪತಿಯೂ ಆಗಿದ್ದಾರೆ.

ಈ ಮಧ್ಯೆ ಕಣ್ಣೂರು ವಿಶ್ವವಿದ್ಯಾಲಯದ ಕುಲಪತಿ, ಖಾತ ಇತಿಹಾಸ ತಜ್ಞ ಗೋಪಿನಾಥ್ ರವೀಂದ್ರನ್ ಅವರು ರಾಜೀನಾಮೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

Join Whatsapp
Exit mobile version