ಕರ ಸೇವಕರ, ವಿಕ್ರಂ ಸಿಂಹ ಮೇಲಿನ ಕ್ರಮ ಸರಿಯಲ್ಲ: ಹೆಚ್‌ಡಿಕೆ

Prasthutha|

ಬೆಂಗಳೂರು: ಕಾಂಗ್ರೆಸ್ ನವರು ವಿರೋಧಿಗಳ ದನಿ ಅಡಗಿಸಲು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕರ ಸೇವಕರ ಮೇಲೆ ದೌರ್ಜನ್ಯ, ವಿಕ್ರಂ ಸಿಂಹ ಮೇಲಿನ ಪ್ರಕರಣ ಅಧಿಕಾರ ದುರ್ಬಳಕೆಯ ಪರಮಾವಧಿ’ ಎಂದು ಮಾಜಿ ಸಿಎಂ ಹೆಚ್‌ಡಿ‌ ಕುಮಾರಸ್ವಾಮಿ ಹೇಳಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಮರ ಕಡಿದ ಆರೋಪಕ್ಕೆ ಗುರಿ ಆಗಿರುವ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರ ಮೇಲೆ ಸರ್ಕಾರ ನಡೆಸುತ್ತಿರುವ ದಬ್ಬಾಳಿಕೆ ಬಗ್ಗೆ ಹಲವಾರು ಅನುಮಾನಗಳು ಇವೆ ಎಂದಿದ್ದಾರೆ. ಅಲ್ಲದೆ, ಸ್ಥಳೀಯ ಒಬ್ಬ ಪುಢಾರಿ ಮುಖ್ಯಮಂತ್ರಿಗೆ ಮಾಹಿತಿ ಕೊಟ್ಟು ಪ್ರತಾಪ್ ಸಿಂಹಗೆ ಪಾಠ ಕಲಿಸಬೇಕು ಎಂದು ತಲೆ ತಿಂದಿದ್ದಾನೆ. ಅಧಿಕಾರಿಗಳಿಗೆ ಕರೆ ಮಾಡಿದ ಸಿದ್ದರಾಮಯ್ಯ ಬೀಟೆ ಮರ ಕಡಿದು ಆ ಜಾಗದಲ್ಲಿ ಹಾಕುವಂತೆ ಹೇಳಿದ್ದರು. ಈ ಪ್ರಕರಣದಲ್ಲಿ ಹಾಸನದ ಶಾಸಕರೊಬ್ಬರ ಪ್ರಧಾನ ಪಾತ್ರ ಇದೆ ಎಂದು ಸಿಎಂ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ನನಗೆ ಅಧಿಕಾರಿಗಳೇ ಮಾಹಿತಿ ಕೊಟ್ಟಿದ್ದಾರೆ. ಬೇಕಿದ್ದರೆ ಮುಖ್ಯಮಂತ್ರಿಯವರ ಮೊಬೈಲ್ ಕರೆಗಳ ಪಟ್ಟಿ ತೆಗೆಸಿ ನೋಡಲಿ. ನಾಗಮೋಹನ್ ದಾಸ್ ನೇತೃತ್ವದ ಆಯೋಗದಿಂದ ತನಿಖೆ ಮಾಡಿಸಲಿ ಎಂದ ಕುಮಾರಸ್ವಾಮಿ, ಕಾಂಗ್ರೆಸ್ ನವರು ವಿರೋಧಿಗಳ ದನಿ ಅಡಗಿಸಲು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕರ ಸೇವಕರ ಮೇಲೆ ದೌರ್ಜನ್ಯ, ವಿಕ್ರಂ ಸಿಂಹ ಮೇಲಿನ ಪ್ರಕರಣ ಅಧಿಕಾರ ದುರ್ಬಳಕೆಯ ಪರಮಾವಧಿ’ ಎಂದಿದ್ದಾರೆ.



Join Whatsapp