ಬಸ್ ನಿಲ್ದಾಣಗಳು, ಸಾರ್ವಜನಿಕ ಸ್ಥಳಗಳಲ್ಲಿ 254 ‘ನಮ್ಮ ಕ್ಲಿನಿಕ್’‌ ಸ್ಥಾಪಿಸಲು ಕ್ರಮ: ದಿನೇಶ್ ಗುಂಡೂರಾವ್

Prasthutha|

ಬೆಂಗಳೂರು: ಬಸ್ ನಿಲ್ದಾಣಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 254 ‘ನಮ್ಮ ಕ್ಲಿನಿಕ್’‌ಗಳನ್ನು ಆರಂಭಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕ್ರಮ ಕೈಗೊಂಡಿದ್ದಾರೆ.

- Advertisement -

ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ದಿನೇಶ್ ಗುಂಡೂರಾವ್, ಹೊಸ ನಮ್ಮ ಕ್ಲಿನಿಕ್‌ಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಸ್ಥಳಗಳನ್ನು ಗುರುತಿಸಿ 15 ದಿನಗಳ ಒಳಗೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ 503 ನಮ್ಮ ಕ್ಲಿನಿಕ್ ಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳನ್ನು ಮತ್ತಷ್ಟು ಸದೃಢಗೊಳಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ಕ್ಲಿನಿಕ್ ಗಳನ್ನು ಪ್ರಾರಂಭಿಸಲು ಸ್ಥಳ ಗುರುತಿಸಬೇಕು ಎಂದು ತಿಳಿಸಿದ್ದಾರೆ.

- Advertisement -

ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ಕ್ಲಿನಿಕ್ ಗಳ ತೆರೆಯಲು ಆದ್ಯತೆ ನೀಡಬೇಕು. ವಿಶೇಷವಾಗಿ ಬಸ್ ನಿಲ್ದಾಣ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ಕ್ಲಿನಿಕ್ ಗಳ ಆರಂಭಕ್ಕೆ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.

Join Whatsapp