ಅಡಿಕೆಗೆ ಸಹಾಯ ಧನ ವಿಸ್ತರಣೆಗೆ ಕ್ರಮ: ಸಿಎಂ ಬೊಮ್ಮಾಯಿ

Prasthutha|

ಚಿತ್ರದುರ್ಗ ( ಹೊಳಲ್ಕೆರೆ ): ಅಡಿಕೆ ಬೆಳೆಗೆ ಸಹಾಯ ಧನ ವಿಸ್ತರಣೆ ಮಾಡಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹೊಳಲ್ಕೆರೆಯಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಅಡಿಕೆ ಬೆಳೆಗೆ ಸಂಬಂಧಿಸಿದಂತೆ ಹನಿ ನೀರಾವರಿ ಜೊತೆಗೆ ಸೇರಿಸಬೇಕೆಂದು ರೈತರ ಒತ್ತಾಯ ಇದೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಸಾಕಷ್ಟು ಯೋಜನೆ ಈಗಾಗಲೇ ಹನಿ ನೀರಾವರಿಯಡಿ ಇದೆ. ಎಸ್.ಸಿ.ಎಸ್.ಟಿ ಯವರಿಗೆ ಶೇ 90 ರಷ್ಟು ಸಹಾಯಧನ ನೀಡಲಾಗುತ್ತಿದೆ . ತೋಟಗಾರಿಕೆಯಲ್ಲಿ ಅಡಿಕೆ ಸೇರಿದೆ. ಸಾಮಾನ್ಯ ವರ್ಗದವರಿವೆ ಶೇ 50 ರಿಂದ 75 ರಷ್ಟು ಹೆಚ್ಚಿಸಿದೆ. ವ್ಯಾಪ್ತಿ ವಿಸ್ತರಣೆಗೆ ಅಗತ್ಯ ಕ್ರಮ ವಹಿಸಲಾಗುವುದು. ಎಂದರು.
ಚಿತ್ರದುರ್ಗಕ್ಕೆ ಅಮಿತ್ ಶಾ ಭೇಟಿ: ದಿನಾಂಕ ನಿಗದಿಯಾಗಿಲ್ಲ
ಅಮಿತ್ ಶಾ ಅವರು ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮ ಕ್ಕೆ ಆಗಮಿಸುವ ಬಗ್ಗೆ ಖಾತ್ರಿಪಡಿಸಿಲ್ಲ. ಬಹಳಷ್ಟು ಪ್ರಸ್ತಾವನೆಗಳು ಹೋಗಿದ್ದು, ದಿನಾಂಕ ನೋಡಿ ನಾಳೆ ನಾಡಿದ್ದರಲ್ಲಿ ಖಾತ್ರಿ ಪಡಿಸಬಹುದೆಂದರು.

- Advertisement -