ಬೆಂಗಳೂರು: ಯಾವುದೇ ವ್ಯಕ್ತಿಗಳು, ಸಂಘಟನೆಗಳು ಕಾನೂನು ವಿರುದ್ಧ ನಡೆದುಕೊಂಡರೆ ಕ್ರಮ ಅನಿವಾರ್ಯ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಬಜರಂಗದಳದ ಕಾರ್ಯಕರ್ತರಿಗೆ ಗಡಿಪಾರಿಗೆ ನೋಟಿಸ್ ನೀಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕಾನೂನು ಹೊರತುಪಡಿಸಿ ಪೊಲೀಸ್ ಇಲಾಖೆ ಯಾವ ಕೆಲಸ ಮಾಡಲ್ಲ. ಬಜರಂಗದಳ ಆಗಲಿ ಯಾವುದೇ ಸಂಘ ಸಂಸ್ಥೆಗಳು ಆಗಲಿ, ವೈಯಕ್ತಿಕವಾಗಿ ಕಾನೂನು ಪ್ರಕಾರ ಏನೇ ಮಾಡಿದರೂ ನಮ್ಮ ಸರ್ಕಾರ ಅವರ ಜೊತೆ ಇರುತ್ತೆ. ಕಾನೂನಿನ ವಿರುದ್ಧವಾಗಿ ಕೆಲಸ ಮಾಡಿದರೆ ಏನು ಮಾಡಬೇಕು? ಪೊಲೀಸ್ ಇಲಾಖೆ ಇರೋದು ಕಾನೂನು ಹಾಗೂ ಶಾಂತಿ ಕಾಪಾಡಲು. ಆ ದೃಷ್ಟಿಯಲ್ಲಿ ಪೊಲೀಸ್ ಇಲಾಖೆ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದರು.