Home ಟಾಪ್ ಸುದ್ದಿಗಳು ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ: ಡಿಕೆ ಶಿವಕುಮಾರ್

ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ: ಡಿಕೆ ಶಿವಕುಮಾರ್

ಬೆಂಗಳೂರು: ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಪೊಲೀಸರ ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.


ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಪಾಕಿಸ್ತಾನ ಪರ ಘೋಷಣೆ ಪ್ರಕರಣದಲ್ಲಿ ಪೊಲೀಸರಿಗೆ ತನಿಖೆ ನಡೆಸಲು ಸ್ವಾತಂತ್ರ್ಯ ನೀಡಿದ್ದೇವೆ. ಈ ಬಗ್ಗೆ ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ ಎಂದು ನಮ್ಮ ರಾಜ್ಯಸಭಾ ಸದಸ್ಯರು ಕೂಡ ಅವತ್ತೇ ಹೇಳಿಕೆ ನೀಡಿದ್ದರು’ ಎಂದರು.


‘ಬಿಜೆಪಿಯವರು ತಮಗೆ ಬೇಕಾದವರ ಕೈಯಿಂದ ಏನೇ ವರದಿ ತರಿಸಿಕೊಳ್ಳಬಹುದು. ಆದರೆ, ಅದು ಅಧಿಕೃತವಲ್ಲ. ಪೊಲೀಸ್ ಅಧಿಕಾರಿಗಳು ಸಮಗ್ರ ತನಿಖೆ ಮಾಡಲಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.

Join Whatsapp
Exit mobile version