ಹೆಚ್ಚಿನ ಹಣ ತೆಗೆದುಕೊಂಡರೆ ಖಾಸಗಿ ಬಸ್ ಮಾಲಕರ ವಿರುದ್ಧ ಕ್ರಮ: ಶ್ರೀರಾಮುಲು

Prasthutha|

ಬೆಂಗಳೂರು: ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲಕರು ನಿಗದಿತ ದರಕ್ಕಿಂತ ಹೆಚ್ಚಿನ ಹಣ ತೆಗೆದುಕೊಂಡರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಎಚ್ಚರಿಸಿದ್ದಾರೆ.

- Advertisement -


ಈ ಕುರಿತು ಸಚಿವರು ಸರಣಿ ಟ್ವೀಟ್ ಮಾಡಿದ್ದಾರೆ. ಹಬ್ಬದ ಸಂದರ್ಭದಲ್ಲಿ ಜನರು ತಮ್ಮ ಗ್ರಾಮಗಳಿಗೆ ತೆರಳುತ್ತಾರೆ. ಇದನ್ನು ಖಾಸಗಿ ಬಸ್ ಮಾಲಕರು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಿದರೆ, ತಪಾಸಣೆ ನಡೆಸಿ, ಸೂಕ್ತ ಕ್ರಮ ಜರುಗಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.


ಹಬ್ಬದ ಕಾರಣ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 5೦೦ಕ್ಕೂ ಹೆಚ್ಚು ಬಸ್ ಸೇವೆ ಆರಂಭಿಸಲಾಗಿದೆ. ಮೆಜೆಸ್ಟಿಕ್ ನಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ತಿರುಪತಿ, ಹೈದರಾಬಾದ್ ಸೇರಿದಂತೆ ಹೆಚ್ಚುವರಿ ಬಸ್‌‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರಯ ಮಾಹಿತಿ ನೀಡಿದ್ದಾರೆ.

- Advertisement -

ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದೂ ಸಚಿವರು ಮನವಿ ಮಾಡಿದ್ದಾರೆ.



Join Whatsapp