ನಾಳೆ ಮಂಡ್ಯ ಬಂದ್ ಗೆ ಕರೆ| ಕಾನೂನು ಬಾಹಿರ ಚಟುವಟಿಕೆಗಳು ನಡೆದರೇ ಕ್ರಮ ಕೈಗೊಳ್ಳಲಾಗುವುದು: ಪರಮೇಶ್ವರ್

Prasthutha|

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ಜಿಲ್ಲೆಯಲ್ಲಿ ಕಾವೇರಿ ನೀರಿಗಾಗಿ ಹೋರಾಟ ತೀವ್ರಗೊಂಡಿದೆ. ಅಲ್ಲದೇ ಶನಿವಾರ ಮಂಡ್ಯ ಬಂದ್ ಗೆ ಕರೆ ನೀಡಿವೆ.

- Advertisement -

ಈ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಪ್ರತಿಭಟನೆ ಮಾಡುವುದು ಅವರ ಹಕ್ಕು, ನಮ್ಮದು ತಕರಾರಿಲ್ಲ. ರಾಜ್ಯದ ಹಿತಾಸಕ್ತಿ ರಕ್ಷಣೆ ಮಾಡಲು ಪ್ರತಿಭಟನೆ ಮಾಡಬಹುದು. ಯಾವುದೇ ರೀತಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಮಾಡುವುದಾಗಲಿ, ಕಾನೂನು ಬಾಹಿರವಾದ ಯಾವುದೇ ಚಟುವಟಿಕೆಗಳು ಮಾಡಬಾರದು ಎಂದು ಹೇಳಿದರು.


ಆ ರೀತಿಯ ಘಟನೆಗಳು ನಡೆದರೆ ತಡೆಯಲು ಪೊಲೀಸರು ಸಿದ್ಧರಾಗಿದ್ದಾರೆ. ಈಗಾಗಲೇ ಮಂಡ್ಯ ಜಿಲ್ಲೆಯ ಹಲವೆಡೆ ಪೊಲೀಸರನ್ನು ನಿಯೋಜಿಸಲಾಗಿದೆ. ಕಾನೂನು ಬಾಹಿರ ಚಟುವಟಿಕೆಗಳು ಮಾಡಲ್ಲ ಎಂಬ ನಂಬಿಕೆ ಇದೆ. ಒಂದು ವೇಳೆ ಅಂತಹ ಘಟನೆ ಸಂಭವಿಸಿದರೇ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Join Whatsapp